ಕಲಬುರಗಿ: ತಾಲ್ಲೂಕಿನ ಫರಹತಾಬಾದ್ ಹೋಬಳಿ ವ್ಯಾಪ್ತಿಯ ಕವಲಗಾ(ಬಿ) ಗ್ರಾಮದ ರೈತ ಹಣಮಂತ ಮೊಸಂಡಿ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಪತ್ನಿ, 6 ವರ್ಷದ ಮಗ ಇದ್ದಾರೆ. ಕೃಷಿಗೆ ಸಂಬಂಧಿಸಿದಂತೆ ಬ್ಯಾಂಕ್ ಆಫ್ ಬರೋಡಾದ ಫರಹತಾಬಾದ್ ಶಾಖೆ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು.
ತಮ್ಮ ಮೂರು ಎಕರೆ ಜಮೀನಿನಲ್ಲಿ ಹತ್ತಿ ಮತ್ತು ತೊಗರಿ ಬೆಳೆದಿದ್ದಾರೆ. ನಿರಂತರ ಮಳೆಯಿಂದ ನೀರು ನಿಂತು ಬೆಳೆ ಕೈಕೊಟ್ಟಿತ್ತು. ಇದರಿಂದ ಮನನೊಂದು ಹೊಲದಲ್ಲಿರುವ ಬಾವಿಯ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.