
ಕಲಬುರಗಿ: ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರ ಪ್ರತಿ ಎಕರೆಗೆ ₹20 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ವೀರ ಕನ್ನಡಿಗರ ಸೇನೆ ಸಂಘಟನೆಯ ಪದಾಧಿಕಾರಿಗಳು ಹಾಗೂ ರೈತರು ಸೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
‘ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ ಬೆಳೆಗಳು ಹಾನಿಯಾಗಿವೆ. ರೈತರು ಸಾಲಸೂಲ ಮಾಡಿ ಬೀಜ, ಗೊಬ್ಬರ ತಂದು ಬಿತ್ತನೆ ಮಾಡಿದ್ದರು. ಬೆಳೆ ಮಳೆಗೆ ಹಾನಿಯಾಗಿದ್ದು ಶೀಘ್ರದಲ್ಲಿ ಸಮೀಕ್ಷೆ ಮಾಡಿ ರೈತರಗೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಅಮೃತ ಪಾಟೀಲ, ರವಿ ಒಂಟಿ, ವಿಠ್ಠಲ ಕುಸಾಳೆ, ಉಮೇಶ ಸಿಂಗೆ, ಸೋಮಶೇಖರ್ ಗಡಿ ನಿಂಗದಳ್ಳಿ, ಗೋಪಾರಾವ, ಸಚಿನಕುಮಾರ್, ಎಂ.ಬಿ ಪಾಟೀಲ, ಹಣಮಂತ ಇಂಜಿನಳ್ಳಿ ಸೇರಿದಂತೆ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.