ಕಲಬುರಗಿ: ನಗರದ ಗಂಜ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದ ಮಹಿಳೆಯೊಬ್ಬರ ವ್ಯಾಟಿನಿ ಬ್ಯಾಗ್‌ನಲ್ಲಿದ್ದ ₹3.80 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಂಚೋಳಿ ತಾಲ್ಲೂಕಿನ ರಾಣಾಪುರ ತಾಂಡಾ ನಿವಾಸಿ ಸೀಮಾ ಶಾಮರಾವ್ ರಾಠೋಡ ಚಿನ್ನಾಭರಣ ಕಳೆದುಕೊಂಡವರು.
‘ಬಸ್ ಹತ್ತುತ್ತಿದ್ದ ವೇಳೆ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 38 ಗ್ರಾಂ ಬಂಗಾರದ ವಿವಿಧ ಚಿನ್ನಾಭರಣಗಳನ್ನು ಕದಿಯಲಾಗಿದೆ’ ಎಂದು ಸೀಮಾ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.