ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ವಿವಿಧ ಸಂಘಟನೆಗಳು ಸೋಮವಾರ ಬೆಳಿಗ್ಗೆ ದಿಢೀರ್ ಪ್ರತಿಭಟನೆ ನಡೆಸಿದವು
ಯಡ್ರಾಮಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಪಟ್ಟಣದಲ್ಲಿ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ.
ಈ ಅವಘಡದಲ್ಲಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗೊಂಡ ಘಟನೆ ಭಾನುವಾರ ತಡರಾತ್ರಿ ಸುಮಾರು 2:30 ಗಂಟೆಗೆ ನಡೆದಿದೆ.
ಬಾಲಕಿಯ ಶವ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಈ ವಿಷಯ ತಾಲ್ಲೂಕು ತಹಶೀಲ್ದಾರ್ ಗಮನಕ್ಕೆ ಇದ್ದು ಪೋಲಿಸ್ ಇಲಾಖೆ ಹೊರತು ಪಡಿಸಿ ಇಲ್ಲಿಯವರೆಗೆ ಯಾವ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿಢೀರ್ ಪ್ರತಿಭಟನೆ: ಗೋಡೆ ಕುಸಿದು 17 ವರ್ಷದ ಬಾಲಕಿ ಮೃತಪಟ್ಟ ಹಿನ್ನೆಲೆ ಪಟ್ಟಣ ಸಮುದಾಯ ಆರೋಗ್ಯ ಕೇಂದ್ರ ಮುಂದೆ ಸೋಮವಾರ ಮುಂಜಾನೆ ವಿವಿಧ ಸಂಘಟನೆಗಳಿಂದ ದಿಢೀರ್ ಪ್ರತಿಭಟನೆ ನಡೆಸುತ್ತಿವೆ.
ಕೂಡಲೇ ಬೆಂಗಳೂರಿನಲ್ಲಿ ಇರುವ ಜೇವರ್ಗಿ ಕ್ಷೇತ್ರ ಶಾಸಕ ಡಾ ಅಜಯಸಿಂಗ್ ಸ್ಥಳಕ್ಕೆ ಆಗಮಿಸಿ ಮೃತ್ತಪಟ್ಟ ಬಾಲಕಿಗೆ ₹ 25 ಲಕ್ಷ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.