ADVERTISEMENT

ಕಲಬುರಗಿ: ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 4:23 IST
Last Updated 29 ಸೆಪ್ಟೆಂಬರ್ 2024, 4:23 IST
ಕೊಲೆ
ಕೊಲೆ   

ಸೇಡಂ: ಪತ್ನಿಯನ್ನು ಕೊಂದ ಪತಿ ಪೊಲೀಸರಿಗೆ ಶರಣಾದ ಘಟನೆ ತಾಲ್ಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ.

ನಾಗಮ್ಮ(42) ಎಂಬುವವರು ಕೊಲೆಯಾದವರು. ಶೇಖರ್ (45) ಕೊಲೆ ಮಾಡಿದ ಆರೋಪಿ. ಸೇಡಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ದಂಪತಿ ಮಧ್ಯೆ ಆಗಾಗ ರಾತ್ರಿ ಜಗಳ ನಡೆಯುತ್ತಿತ್ತು. ಇಬ್ಬರ ಮಧ್ಯೆ ಜಗಳವಾಗಿದ್ದರಿಂದ ಹೆಂಡತಿ ತವರು ಮನೆಗೆ ಹೋಗಿದ್ದಳು. ಶನಿವಾರ ವಾಪಸ್ ಗಂಡನ ಮನೆಗೆ ಬಂದಿದ್ದಳು. ರಾತ್ರಿ ಕೊಡಲಿಯಿಂದ ಹೆಂಡತಿ ಕತ್ತಿಗೆ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಹೆಂಡತಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ADVERTISEMENT

ಸ್ಥಳಕ್ಕೆ ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಮಂಜುನಾಥರೆಡ್ಡಿ ಭೇಟಿ ನೀಡಿದ್ದಾರೆ.‌ ಶೇಖರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.