ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಹಕಾರದೊಂದಿಗೆ ನಗರದಲ್ಲಿ ₹262 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ಡಿಸೆಂಬರ್ 22ರಂದು ಲೋಕಾರ್ಪಣೆಗೊಳ್ಳಲಿದೆ.
ಅಂದು ಬೆಳಿಗ್ಗೆ 11.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟಡ ಲೋಕಾರ್ಪಣೆ ಮಾಡುವರು. ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ 371 (ಜೆ) ತಿದ್ದುಪಡಿ ಕಾಯ್ದೆ ಜಾರಿಯಾಗಿ ಒಂದು ದಶಕವಾದ ಕಾರಣ ಈ ಕಟ್ಟಡ ನಿರ್ಮಿಸಲಾಗಿದೆ. ಇದು 371 ಹಾಸಿಗೆ ಸಾಮರ್ಥ್ಯ ಹೊಂದಿರುವುದು ವಿಶೇಷ. ಅತ್ಯಾಧುನಿಕ ಸೌಲಭ್ಯವಿರುವ ಈ ಆಸ್ಪತ್ರೆಯಲ್ಲೇ ಇನ್ನು ಮುಂದೆ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.