ADVERTISEMENT

ಕಲಬುರಗಿ| ಉದ್ಯೋಗ ಗಿಟ್ಟಿಸುವ ಪ್ರಯತ್ನ ಮಾಡಿ: ನ್ಯಾಯಾಧೀಶ ಶ್ರೀನಿವಾಸ ನವಲೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2026, 5:27 IST
Last Updated 14 ಜನವರಿ 2026, 5:27 IST
ಕಲಬುರಗಿಯ ರಮಾಬಾಯಿ ಜಹಾಗೀರದಾರ ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಯುವ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಉದ್ಘಾಟಿಸಿದರು
ಕಲಬುರಗಿಯ ರಮಾಬಾಯಿ ಜಹಾಗೀರದಾರ ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಯುವ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಉದ್ಘಾಟಿಸಿದರು   

ಕಲಬುರಗಿ: ‘ಹದಿವಯಸ್ಸಿನ ಯುವಕರು ವಾಹನಗಳ ಚಾಲನೆ, ಅತಿರೇಕಕ್ಕೆ ಹೋಗುವುದು, ವಿನಾ ಕಾರಣ ಕೋಪಿಸಿಕೊಳ್ಳುವುದು ಮಾಡಬಾರದು. ಶಿಕ್ಷಣ ಮುಗಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.

ನಗರದ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ಸುಂದರವಾಗಿಸಿಕೊಳ್ಳಬೇಕು’ ಎಂದ ಅವರು, ವಿದ್ಯಾರ್ಥಿಗಳಿಗಾಗಿ ಕಾನೂನು ಸೇವೆ, ಕಾನೂನು ಪ್ರಾಧಿಕಾರದ ವಿಶೇಷ ಸೌಲಭ್ಯಗಳನ್ನು ವಿವರಿಸಿದರು.

ADVERTISEMENT

ಅತಿಥಿ ಬಸವರಾಜ ಬಿರಾದಾರ, ಕಾಲೇಜಿನ ಪ್ರಾಚಾರ್ಯ ಭುರ್ಲಿ ಪ್ರಹ್ಲಾದ, ಉಪಪ್ರಾಚಾರ್ಯ ಕೇದಾರ ದೀಕ್ಷಿತ್ ಇದ್ದರು. ಮಳೇಂದ್ರ ಹಿರೇಮಠ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.