
ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಎಸ್‍ಬಿಐ ಶಾಖೆಯಲ್ಲಿ ರೈತರು, ಕೃಷಿ ಕೂಲಿಕಾರ್ಮಿಕರು, ವಿದ್ಯಾರ್ಥಿಗಳಿಗೆ ಸರಳವಾಗಿ ಬ್ಯಾಂಕ್ ಸಾಲಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಜ.28ರಂದು ಮಧ್ಯಾಹ್ನ 12ಕ್ಕೆ ಕಲಬುರಗಿಯ ಲೀಡ್ ಬ್ಯಾಂಕ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ತಿಳಿಸಿದರು.
‘ಚಿಂಚೋಳಿ ಎಸ್‍ಬಿಐ ಶಾಖೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ಮಧ್ಯವರ್ತಿಗಳ ಮುಖಾಂತರ ಲಂಚ ಪಡೆದು ಸಾಲ ನೀಡಲಾಗುತ್ತಿದೆ. ಮುದ್ರಾ ಯೋಜನೆ, ಪ್ರಧಾನಮಂತ್ರಿ ರೋಜ್‌ಗಾರ ಯೋಜನೆ ಅಡಿ ಮತ್ತು ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡಿದವರಿಗೂ ಸಾಲ ಸಿಗುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.
‘ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಲ್ಲಿ ರೈತರಿಗೆ ಸರಳವಾಗಿ ಬೆಳೆ ಸಾಲ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರಮುಖರಾದ ಮೇಘರಾಜ ಕಠಾರೆ, ಕಾಶಿನಾಥ ಬಂಡಿ, ದಶರಥ ತಳವಾರ, ಜಗದೇವಿ ಚಂದನಕೇರಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.