ಕಲಬುರಗಿ: ಮಕ್ಕಳಲ್ಲಿ ವಿಜ್ಞಾನ ಮತ್ತು ಗಣಿತ ಕಲಿಕೆ ಬಗ್ಗೆ ಆಸಕ್ತಿ ಮೂಡಿಸುವ ದೃಷ್ಟಿಯಿಂದ ನಗರದ ಗುಬ್ಬಿ ಕಾಲೊನಿಯ ಸರೋಜಾ ಸುಭಾಷ್ ಗುತ್ತೇದಾರ ಪಬ್ಲಿಕ್ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ವಸ್ತು ಪ್ರದರ್ಶನವನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ರಾಜ್ಯ ಅಧ್ಯಕ್ಷ ಗಿರೀಶ ಕಡ್ಲೇವಾಡ ಉದ್ಘಾಟಿಸಿ, ‘ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಒಂದು ಶೈಕ್ಷಣಿಕ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಮತ್ತು ಗಣಿತ ಸಂಬಂಧಿತ ಆವಿಷ್ಕಾರಗಳನ್ನು ಪ್ರದರ್ಶಿಸುತ್ತಾರೆ. ವಿದ್ಯಾರ್ಥಿಗಳಿಗೆ ತಮ್ಮ ಕೌಶಲಗಳನ್ನು ಅಭಿವ್ಯಕ್ತಿಸಲು ಮತ್ತು ಹೊಸ ತಾಂತ್ರಿಕತೆಯನ್ನು ಅರಿಯಲು ಉತ್ತಮ ವೇದಿಕೆಯಾಗಿದೆ’ ಎಂದರು.
ಸಂಸ್ಥೆಯ ಆಡಳಿತಾಧಿಕಾರಿ ರಾಘವೇಂದ್ರ ಚಿಂಚನಸೂರ ಮಾತನಾಡಿದರು.
ಪರಮಾಣುಗಳ ರಚನೆ, ವಿದ್ಯುತ್ಕಾಂತೀಯ ಕ್ರೇನ್, ಪರಿಸರ ಮಾಲಿನ್ಯ ನಿಯಂತ್ರಣ, ರಕ್ತ ಶುದ್ಧೀಕರಣ, ಸ್ವಯಂ ಚಾಲಿತ ಗಡಿ ಕಾಯುವ ಯಂತ್ರ, ನೀರಿನ ಮಟ್ಟ ಸೂಚಕ ಮತ್ತಿತರ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ ಗಮನ ಸೆಳೆದರು.
ಶಾಲೆಯ ಮುಖ್ಯ ಶಿಕ್ಷಕಿ ಐಶ್ವರ್ಯಾ ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪಾಲಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.