
ಆನಂದ ಬಸರಕೋಡ
ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಮಿರಿಯಾಣ ಪೊಲೀಸ್ ಠಾಣೆಯ ಹೆಡ್ ಕಾನಸ್ಟೆಬಲ್ ಆನಂದ ಬಸರಕೋಡ (58) ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ನಿವಾಸಿ ಆನಂದ ಅವರು ಭಾರತೀಯ ಸೇನೆಯಲ್ಲಿ18 ವರ್ಷ ಸೇವೆ ಸಲ್ಲಿಸಿ ನಂತರ ರಾಜ್ಯದಲ್ಲಿ ಪೊಲೀಸ್ ಇಲಾಖೆ ಸೇರಿದ್ದರು.
ಕಲಬುರಗಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ಕಳೆದ 5 ವರ್ಷಗಳಿಂದ ಮಿರಿಯಾಣ ಠಾಣೆಯಲ್ಲಿ ಹೆಡ್ ಕಾನಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.
‘ಬುಧವಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ತನಕ ರಾತ್ರಿ ಪಾಳಿ ಕೆಲಸ ಮಾಡಿದ್ದರು. ಬಳಿಕ ಠಾಣೆ ಎದುರಿನ ಶೆಡ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಬೆಳಿಗ್ಗೆ 6 ಗಂಟೆಯಿಂದ 6.30ರ ನಡುವೆ ಮೃತಪಟ್ಟಿದ್ದಾರೆ. ಮೃತದೇಹ ಚಂದಾಪುರದ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆ ಅಂತ್ರಕ್ರಿಯೆ ನಡೆಯಲಿದೆ’ ಎಂದು ಮೂಲಗಳು ಹೇಳಿವೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸರ್ಕಲ್ ಇನ್‌ಸ್ಪೆಕ್ಟರ್ ಕಪಿಲದೇವ, ಸಬ್ ಇನಸ್ಪೆಕ್ಟರ್ ಮಡಿವಾಳಪ್ಪ ಬಾಗೋಡಿ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.