ADVERTISEMENT

ಡಿ.ಕೆ. ಶಿವಕುಮಾರ್ ಭೇಟಿಯಾದ ಕಲಬುರ್ಗಿ ಪಾಲಿಕೆಯ ನೂತನ ಸದಸ್ಯರು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 9:56 IST
Last Updated 11 ಸೆಪ್ಟೆಂಬರ್ 2021, 9:56 IST
ಕಾಂಗ್ರೆಸ್ ಪಕ್ಷದ ಸದಸ್ಯರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.
ಕಾಂಗ್ರೆಸ್ ಪಕ್ಷದ ಸದಸ್ಯರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.   

ಕಲಬುರ್ಗಿ: ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಜಯಗಳಿಸಿದ 27 ಜನ ಸದಸ್ಯರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ವಿಚಾರವನ್ನು ಶಿವಕುಮಾರ್ ತಮ್ಮ ಫೇಸ್‌ಬುಕ್‌ ‍ಪುಟದಲ್ಲಿ ಬರೆದುಕೊಂಡಿದ್ದಾರೆ.

ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲು ಬೇಕಿರುವ ಸರಳ ಬಹುಮತ ಯಾವ ಪಕ್ಷಕ್ಕೂ ಸಿಕ್ಕಿಲ್ಲ. ಹಾಗೂ ಕಾಂಗ್ರೆಸ್, ಬಿಜೆಪಿ ಜೆಡಿಎಸ್‌ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲು ಹವಣಿಸುತ್ತಿವೆ.

ಇತ್ತೀಚೆಗೆ ಚುನಾಯಿತರಾದ ನಾಲ್ವರು ಜೆಡಿಎಸ್‌ ಸದಸ್ಯರು ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ADVERTISEMENT

ಕೆಪಿಸಿಸಿ ವಕ್ತಾರರೂ ಆದ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಸದಸ್ಯರೊಂದಿಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.