ADVERTISEMENT

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಕೊಲೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 5:30 IST
Last Updated 25 ಜೂನ್ 2025, 5:30 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕಲಬುರಗಿ: ನಗರ ಹೊರವಲಯದ ದಾಬಾವೊಂದರಲ್ಲಿ ಮಂಗಳವಾರ ತಡರಾತ್ರಿ ಮೂವರನ್ನು ‌ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ADVERTISEMENT

ಸಿದ್ದಾರೂಢ (32) , ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು. ಈ ಮೂವರೂ ಸಂಬಂಧಿಕರಾಗಿದ್ದು, ಸಬರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ.

ಸಿದ್ದಾರೂಢ, ಜಗದೀಶ್ ಮತ್ತು ರಾಮಚಂದ್ರ ಅವರು ಪಟ್ಟಣ ಗ್ರಾಮ ಸಮೀಪದ ದಾಬಾದಲ್ಲಿ ಕೆಲಸ ಮಾಡುತ್ತಿದ್ದರು. ದಾಬಾಗೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.