ADVERTISEMENT

ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 12:53 IST
Last Updated 23 ಜನವರಿ 2026, 12:53 IST
   

ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಎರಡೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಸಿದ್ದೇಶ್ವರ ಕಾಲೊನಿ ನಿವಾಸಿ ಅನಸೂಯಾ ಆಕಡೆ (26) ಮೃತರು.

ಅನಸೂಯಾ ತಮ್ಮ ಅತ್ತೆ ಮಗ ಅವಿನಾಶ್ ಆಕಡೆ ಅವರನ್ನು ಪ್ರೀತಿಸುತ್ತಿದ್ದರು. ಬಳಿಕ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ 2025ರ ನವೆಂಬರ್‌ 27ರಂದು ಅನಸೂಯಾ ಅವರು ಅವಿನಾಶ ಅವರನ್ನೇ ಮದುವೆಯಾಗಿದ್ದರು.

‘ಅನಸೂಯಾ ಕಾಲೇಜು ದಿನಗಳಿಂದಲೇ ಅವಿನಾಶನನ್ನು ಪ್ರೀತಿಸುತ್ತಿದ್ದರು. ಬಳಿಕ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನಗೆ ನಾಲ್ವರು ಹೆಣ್ಣು ಮಕ್ಕಳು. ಒಬ್ಬಳು ಗುಜರಾತ್‌, ಇನ್ನೊಬ್ಬಳು ಮುಂಬೈ, ಮತ್ತೊಬ್ಬಳು ಬೆಂಗಳೂರಿನಲ್ಲಿ ಇದ್ದಾರೆ. ತನ್ನ ಸಹೋದರಿಯರು ನಗರಗಳಲ್ಲಿ ನೆಲೆಸಿದ್ದಾರೆ. ತಾನು ಹಳ್ಳಿಯಲ್ಲಿ ವಾಸ ಮಾಡುತ್ತಿರುವುದಕ್ಕೆ ಅನಸೂಯಾ ನೊಂದಿದ್ದಳು. ಆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಳು. ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಯಿದೆ’ ಎಂದು ಅನಸೂಯಾ ಅವರ ತಂದೆ ದತ್ತು ಪಾಟೀಲ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಈ ಘಟನೆ ಕುರಿತು ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.