ADVERTISEMENT

ಪಿಡಿಒ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 13:33 IST
Last Updated 16 ಜೂನ್ 2020, 13:33 IST
ಅಖಿಲ ಭಾರತ ಕಿಸಾನ್‌ ಸಭಾ ಜಿಲ್ಲಾ ಘಟಕದವರು ಜಿಲ್ಲಾ ಪಂಚಾಯಿತಿ ಸಿಇಒ ಡಾ.ರಾಜಾ ಪಿ. ಅವರಿಗೆ ಮನವಿ ಸಲ್ಲಿಸಿದರು
ಅಖಿಲ ಭಾರತ ಕಿಸಾನ್‌ ಸಭಾ ಜಿಲ್ಲಾ ಘಟಕದವರು ಜಿಲ್ಲಾ ಪಂಚಾಯಿತಿ ಸಿಇಒ ಡಾ.ರಾಜಾ ಪಿ. ಅವರಿಗೆ ಮನವಿ ಸಲ್ಲಿಸಿದರು   

ಕಲಬುರ್ಗಿ: ಆಳಂದ ತಾಲ್ಲೂಕು ಪಡಸಾವಳಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಕಿಸಾನ್‌ ಸಭಾ ಜಿಲ್ಲಾ ಘಟಕದಿಂದ ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

‘ಪಿಡಿಒ ದಶರಥ ಪಾತ್ರೆ ಬೇಕಾಬಿಟ್ಟಿ ವಾಹನ ಚಾಲನೆ ಮಾಡಿ, ರೈತ ಬಾಬು ದಸ್ತಗೀರ ಮೂಲಗೆ ಅವರ ಸಾವಿಗೆ ಕಾರಣರಾಗಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ನೀರಿನ ಸಮಸ್ಯೆ ಬಗ್ಗೆ ವಿಚಾರಿಸಿದ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಜಮಾದಾರ ಅವರ ಮೇಲೆ ಹಲ್ಲೆ ಈ ಪಿಡಿಒ ಮಾಡಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮಾರುತಿ ಮಾನ್ಪಡೆ, ಅಖಿಲ ಭಾರತ ಕಿಸಾನ್‌ ಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮೌಲಾ ಮುಲ್ಲಾ ಒತ್ತಾಯಿಸಿದರು.

‘ಈ ಪಿಡಿಒ ವಿರುದ್ಧ ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅಮಾನತುಗೊಳಿಸದಿರುವುದು ವಿಪರ್ಯಾಸ. ಈ ವಿಷಯವಾಗಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ರಮವಾಗಿಲ್ಲ’ ಎಂದು ದೂರಿದರು.

ADVERTISEMENT

ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಮಲಕಪ್ಪ ಸುಂಠಾಣ, ವಿಶ್ವನಾಥ ಜಮಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.