ಮಳೆಗೆ ಕೊಚ್ಚಿ ಹೋದ ರಸ್ತೆ
ಅಫಜಲಪುರ(ಕಲಬುರಗಿ ಜಿಲ್ಲೆ): ತಾಲ್ಲೂಕಿನ ಮಣ್ಣೂರ, ಶೇಷಗಿರಿ, ಹೊಸೂರ, ಉಪ್ಪಾರವಾಡಿ ಸೇರಿದಂತೆ ಮಹಾರಾಷ್ಟ್ರದ ನಾಗಣಸೂರ, ತೋಳನೂರ, ಉಡಗಿ ಗ್ರಾಮಗಳಲ್ಲಿ ಬುಧವಾರ ತಡರಾತ್ರಿ ಭಾರಿ ಮಳೆ ಸುರಿದಿದೆ.
ಇದರಿಂದ ಹಳ್ಳ–ಕೊಳ್ಳಗಳು ಉಕ್ಕೇರಿ ಹರಿಯುತ್ತಿದ್ದು, ಮಣ್ಣೂರ ಗ್ರಾಮದಿಂದ ಕರಜಗಿ ಹೋಗುವ ಮಾರ್ಗದ ಮಧ್ಯದಲ್ಲಿರುವ ರಸ್ತೆ ಕಿರುಹಳ್ಳದ ರಭಸಕ್ಕೆ ಕೊಚ್ಚಿ ಹೋಗಿದೆ.
ಗುರುವಾರ ಬೆಳಿಗ್ಗೆಯಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ರಸ್ತೆ ಕೊಚ್ಚಿ ಹೋಗಿದ್ದರಿಂದ ಮಣ್ಣೂರ ಗ್ರಾಮದಿಂದ ಕರಜಗಿ, ಅಫಜಲಪುರದತ್ತ ಹೋಗುವ ಜನರು ಪರದಾಡುವಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.