ADVERTISEMENT

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಅಪರಾಧಿಗೆ 20 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 18:51 IST
Last Updated 15 ಅಕ್ಟೋಬರ್ 2025, 18:51 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಕಲಬುರಗಿ: ತಾಲ್ಲೂಕಿನ ಗ್ರಾಮವೊಂದರಲ್ಲಿ 17 ವರ್ಷ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ ಅತ್ಯಾಚಾರ ಎಸೆದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಹಾಗೂ ₹2.50 ಲಕ್ಷ ದಂಡ ವಿಧಿಸಿದೆ.

ಕಾಳಗಿ ತಾಲ್ಲೂಕಿನ ಅರಣಕಲ್‌ ಗ್ರಾಮಸ್ಥ ಮಲ್ಲಿಕಾರ್ಜುನ ಅಲಿಯಾಸ್‌ ಮಲ್ಲಪ್ಪ ಕಲಗುರ್ತಿ ಶಿಕ್ಷೆಗೆ ಒಳಗಾದ ಅಪರಾಧಿ.

ADVERTISEMENT

ಅಪರಾಧಿಯು ಬಾಲಕಿಯೊಬ್ಬರನ್ನು ಕಲಬುರಗಿ ತಾಲ್ಲೂಕಿನ ಗ್ರಾಮವೊಂದರಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡು ಬೆಂಗಳೂರಿಗೆ ಹೋಗಿದ್ದ. ಅಲ್ಲಿ ಒಂದು ತಿಂಗಳ ಕಾಲ ಬಾಲಕಿ ಮೇಲೆ ಅತ್ಯಾಚಾರ ಎಸೆಗಿದ್ದ. ಬಾಲಕಿಯು ನಿನ್ನೊಂದಿಗೆ ಮದುವೆ ಮಾಡುವಂತೆ ಪಾಲಕರಿಗೆ ಹೇಳುತ್ತೇನೆ, ಊರಿಗೆ ಕರೆದುಕೊಂಡು ಹೋಗು ಎಂದಾಗ ಬೆಂಗಳೂರಿನಿಂದ ಕಲಬುರಗಿಗೆ ಕರೆ ತಂದುಬಿಟ್ಟಿದ್ದ.

ಬಳಿಕ ಈ ಕುರಿತು ಕಲಬುರಗಿಯ ಸಬರ್ಬನ್‌ ಠಾಣೆಯಲ್ಲಿ ಪೋಕ್ಸೊ ಹಾಗೂ ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಎಸಿಪಿ ಗೀತಾ ಬೆನಹಾಳ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಪೋಕ್ಸೊ) ಮಹ್ಮದ್ ಮುಜೀರ್‌ ಉಲ್ಲಾ ಸಿ.ಜಿ., ಪೋಕ್ಸೊ ಕಾಯ್ದೆಗಳಿಗೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹2.50 ದಂಡ ವಿಧಿಸಿದ್ದಾರೆ.

ಅಲ್ಲದೇ, ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

ಈ ‍ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ(ಪೋಕ್ಸೊ) ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.