ಕಲಬುರಗಿ: ಹಿರಿಯ ಐಎಎಸ್ ಅಧಿಕಾರಿ ಕೃಷ್ಣ ಬಾಜಪೇಯಿ ಅವರನ್ನು ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ಬಾಜಪೇಯಿ ಅವರು ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದರು. ಇತ್ತೀಚೆಗೆ ಹುದ್ದೆ ತೋರಿಸದೇ ಅವರನ್ನು ವರ್ಗಾವಣೆಗೊಳಿಸಲಾಗಿತ್ತು. ಇದೀಗ ಜೆಸ್ಕಾಂಗೆ ವರ್ಗಾವಣೆ ಮಾಡಲಾಗಿದೆ.
ಬಾಜಪೇಯಿ ಅವರ ವರ್ಗಾವಣೆ ಮೂಲಕ ಜೆಸ್ಕಾಂಗೆ ಮತ್ತೆ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದಂತಾಗಿದೆ. ಇದುವರೆಗೆ ಎಂ.ಡಿ.ಯಾಗಿದ್ದ ರವೀಂದ್ರ ಕರಲಿಂಗಣ್ಣವರ ಅವರು ಕೆಎಎಸ್ ಅಧಿಕಾರಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.