ADVERTISEMENT

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 4:29 IST
Last Updated 26 ಜನವರಿ 2025, 4:29 IST
   

ಕಲಬುರಗಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಇಲ್ಲಿನ ಡಿಎಆರ್ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಹಾಗೂ ಜಿಲ್ಲಾ ಉಸ್ತುವಾರಿ ‌ಸಚಿವ ಪ್ರಿಯಾಂಕ್ ‌ಖರ್ಗೆ ಅವರು ರಾಷ್ಟ್ರ ಧ್ವಜಾರೋಹಣ ‌ನೆರವೇರಿಸಿದರು.

ನಂತರ ಪೊಲೀಸ್, ಅರಣ್ಯ, ಸಿಎಆರ್, ಡಿಎಆರ್, ಕೆಎಸ್ಆರ್ ಪಿ, ಅಗ್ನಿಶಾಮಕ ದಳ ಸೇರಿದಂತೆ ವಿವಿಧ ತಂಡಗಳಿಂದ ಧ್ವಜವಂದನೆ ಸ್ವೀಕರಿಸಿದರು.

ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ‌ ಕಮಕನೂರ, ಕಲಬುರಗಿ ‌ನಗರಾಭಿವೃದ್ಧಿ‌ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಬಿ, ಕಲ್ಯಾಣ ‌ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ‌ (ಕೆಕೆಆರ್ ಡಿಬಿ) ಕಾರ್ಯದರ್ಶಿ ಎಂ. ಸುಂದರೇಶಬಾಬು, ಜಿಲ್ಲಾ ಪಂಚಾತಿಯಿ‌ ಸಿಇಓ ಭಂವರ್ ಸಿಂಗ್ ಮೀನಾ, ಕಲಬುರಗಿ ‌ನಗರ ಪೊಲೀಸ್ ‌ಕಮಿಷನರ್ ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸಲು ವೇದಿಕೆಯಲ್ಲಿದ್ದರು.

ADVERTISEMENT

ಇದಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಸಚಿವ ಪ್ರಿಯಾಂಕ್ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.