ಕಲಬುರಗಿ: ಯುವಕನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ತಾಲ್ಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.
ಶ್ರೀನಿವಾಸ ಸರಡಗಿಯ ನಿವಾಸಿ ಶ್ರೀಮಂತ (30) ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ ಸರಡಗಿ ಗ್ರಾಮದ ಸುದೀಪ್, ಶಿವಕುಮಾರ, ಶ್ರೀಕಾಂತ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೊಲೆ ನಡೆದ ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ಎಚ್.ನಾಯಕ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ. ಬೆರಳಚ್ಚು ತಂಡ, ಶ್ವಾನ ದಳ ಸ್ಥಳ ಪರಿಶೀಲನೆ ನಡೆಸಿವೆ.
ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.