ದಂಡ (ಸಾಂದರ್ಭಿಕ ಚಿತ್ರ)
– ಐಸ್ಟಾಕ್ ಚಿತ್ರ
ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮನವಿ ಮೇರೆಗೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಿ ಆದೇಶ ಹೊರಡಿಸಿದೆ. ಈ ರಿಯಾಯಿತಿಯು ಸೆ.12ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುತ್ತದೆ.
ವಾಹನ ಸವಾರರು, ವಾಹನದ ಮಾಲೀಕರು ದಂಡದ ಮೊತ್ತದಲ್ಲಿ ಶೇ 50ರಷ್ಟು ಮಾತ್ರ ಪಾವತಿಸಿ ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.