ಆಳಂದ: ಪಟ್ಟಣದಲ್ಲಿ ಬುಧವಾರ ನಸುಕಿನ ಜಾವ ವಾಯುವಿಹಾರಕ್ಕೆ ತೆರಳಿದ ಮಹಿಳೆಗೆ ಕ್ರೂಸರ್ ಡಿಕ್ಕಿ ಹೊಡೆದಿದ್ದರಿಂದ ಪಾದಚಾರಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪಟ್ಟಣದ ಜೈನಗಲ್ಲಿ ನಿವಾಸಿ ಕಾಶಿಬಾಯಿ ಮಡಿವಾಳಪ್ಪ ಪರೀಟ(52) ಮೃತರು. ಅವರಿಗೆ ಪತಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಆಳಂದ -ಕಲಬುರಗಿ ಮುಖ್ಯ ರಸ್ತೆಯಲ್ಲಿ ಆಳಂದ ಬಸ್ ಘಟಕದ ಮುಂಭಾಗದಲ್ಲಿ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.