ADVERTISEMENT

ಕಲಬುರ್ಗಿ: ಕಲ್ಲು ಗಣಿಗಾರಿಕೆ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 21:15 IST
Last Updated 25 ಫೆಬ್ರುವರಿ 2021, 21:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕಲಬುರ್ಗಿ: ಜಿಲ್ಲೆಯ ಕಲಬುರ್ಗಿ, ಸೇಡಂ, ಚಿಂಚೋಳಿ, ಯಡ್ರಾಮಿ, ಶಹಾಬಾದ್‌ ಸೇರಿದಂತೆ ಹಲವು ತಾಲ್ಲೂಕುಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಪರವಾನಗಿ ಅವಧಿ ಮೀರಿದರೂ ಗಣಿಗಾರಿಕೆ ನಡೆಸಿದ್ದನ್ನು ಪತ್ತೆ ಹಚ್ಚಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ, ಹಲವು ಯಂತ್ರಗಳನ್ನು ವಶಪಡಿಸಿಕೊಂಡು ಮೊಕದ್ದಮೆ ಹೂಡಿದೆ.

ಕಲಬುರ್ಗಿ ತಾಲ್ಲೂಕಿನ ಬೇಲೂರ ಗ್ರಾಮದ ಪಟ್ಟಾ ಭೂಮಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಿದ್ದನ್ನು ಪತ್ತೆ ಹಚ್ಚಿ ಒಂಬತ್ತು ಹಿಟಾಚಿ ಯಂತ್ರಗಳನ್ನು ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಿಂದಗಿ (ಬಿ) ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರು ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಯಡ್ರಾಮಿ ತಾಲ್ಲೂಕಿನ 13 ಕಡೆಗಳಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ 13 ಜನ ಹಾಗೂ ಸೇಡಂ ತಾಲ್ಲೂಕಿನ ಆಡಕಿ ಗ್ರಾಮದಲ್ಲಿ 6 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಶಹಾಬಾದ್‌ ತಾಲ್ಲೂಕಿನ ಮುತಗಾ ಗ್ರಾಮದಲ್ಲಿ ಗಣಿಗಾರಿಕೆಗೆ ಬಳಸಿದ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಮೋಹನ್ ಎಸ್‌. ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.