ಕಲಬುರ್ಗಿ: ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಮೊಟಕುಗೊಳಿಸಿದ್ದಾರೆ.
ಜಿಂದಾಲ್ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಕಲಬುರ್ಗಿಗೆ ಬಂದಿರುವ ಅವರು, ಇಲ್ಲಿಂದ ಆಲಮಟ್ಟಿಗೆ ಹೋಗಿ ಅಲ್ಲಿ ಸಭೆ ನಡೆಸಬೇಕಿತ್ತು. ಆದರೆ, ಹಮಾಮಾನ ಪ್ರತಿಕೂಲವಾಗಿರುವುದರಿಂದ ಆಲಮಟ್ಟಿಗೆ ತೆರಳುವುದನ್ನು ರದ್ದುಗೊಳಿಸಿದ್ದಾರೆ.
ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.