ADVERTISEMENT

ಕಲಬುರಗಿ | 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 16:21 IST
Last Updated 13 ಜುಲೈ 2024, 16:21 IST
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕಲಬುರಗಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರಿಗೆ ಮನವಿ ಸಲ್ಲಿಸಿದರು 
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕಲಬುರಗಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರಿಗೆ ಮನವಿ ಸಲ್ಲಿಸಿದರು    

ಕಲಬುರಗಿ: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ನೇತೃತ್ವದಲ್ಲಿ ನೌಕರರ ಸಂಘ ನಿಯೋಗವು ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಮನವಿ ಸಲ್ಲಿಸಿತು. 

ಶಾಸಕ ಅಲ್ಲಮಪ್ರಭು ಅವರನ್ನು ಭೇಟಿ ಮಾಡಿದ ನಿಯೋಗವು ನೌಕರರ ಬಹು ದಿನದ ಬೇಡಿಕೆಯಾದ ಏಳನೇ ವೇತನ ಸೇರಿ ಇನ್ನಿತರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಫೌಜಿಯಾ ಅವರನ್ನು ಭೇಟಿ ಮಾಡಿದ ನಿಯೋಗವು, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಹಾಗೂ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯ ಮಾಡಿತು.

ADVERTISEMENT

ಸಂಘದ ಪದಾಧಿಕಾರಿಗಳಾದ ಸಿದ್ದಲಿಂಗಯ್ಯ ಮಠಪತಿ, ಹಣಮಂತರಾಯ ಗೊಳಸಾರ, ಸತೀಶ ಸಜ್ಜನ್, ವಿಜಯಕುಮಾರ‌ ನಾಗೂರ, ವೀರೇಶ ಪೂಜಾರಿ, ಹಣಮಂತ‌ ಮರಡಿ, ಅವ್ವಣ್ಣ, ಧನಂಜಯ್ ಸೇರಿದಂತೆ ಅನೇಕ ನೌಕರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.