ಜೇವರ್ಗಿ: ತಾಲ್ಲೂಕಿನ ಬಿರಾಳ ಗ್ರಾಮದ ನಿವಾಸಿ, ಕೃಷಿ ವಿಜ್ಞಾನಿ ಡಾ. ಎಸ್.ಎ.ಪಾಟೀಲ ಅವರ ನಿಧನ ರೈತಾಪಿ ವರ್ಗ ಸೇರಿದಂತೆ ತಾಲ್ಲೂಕಿನ ಜನತೆಯಲ್ಲಿ ಕರಾಳ ಛಾಯೆ ಮೂಡಿಸಿದೆ.
ಸೋಮವಾರ ತಮ್ಮ ಕಲಬುರಗಿ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಡಾ. ಎಸ್.ಎ.ಪಾಟೀಲ ಅವರ ಪಾರ್ಥಿವ ಶರೀರವನ್ನು ಕಲಬುರಗಿಯಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಮಂಗಳವಾರ ರಾತ್ರಿ ಮೃತರ ಪಾರ್ಥಿವ ಶರೀರ ಸ್ವಗ್ರಾಮ ಬಿರಾಳ ಗ್ರಾಮದಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಬುಧವಾರ ಮಧ್ಯಾಹ್ನ 1.30ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು.
ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ಸಿಪಿಐ ರಾಜೇಸಾಬ್ ನದಾಫ್ ತಾಲ್ಲೂಕು ಆಡಳಿತದ ವತಿಯಿಂದ ಗೌರವ ಸಲ್ಲಿಸಿದರು.
ಮಠಾಧೀಶರಾದ ಸೊನ್ನದ ಶಿವಾನಂದ ಸ್ವಾಮೀಜಿ, ಜೇರಟಗಿಯ ಮಹಾಂತ ಸ್ವಾಮೀಜಿ, ಕಡಕೋಳಕದ ರುದ್ರಮುನಿ ಶಿವಾಚಾರ್ಯರು, ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ, ಸಂತೆಕೆಲ್ಲೂರಿನ ಗುರುಬಸವ ಸ್ವಾಮೀಜಿ, ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ. ಅಜಯಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ಬಿ.ಆರ್.ಪಾಟೀಲ, ಶಶೀಲ್ ನಮೋಶಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಕೃಷಿ ಜಿಲ್ಲಾ ನಿದೇರ್ಶಕ ಸಮದ್ ಪಟೇಲ್ ಸೇರಿದಂತೆ ಕೃಷಿ ಇಲಾಖೆ, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು, ರೈತರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.