ADVERTISEMENT

ಸಾಹಿತ್ಯ ಸಮ್ಮೇಳನ| ಎಲ್ಲಿಂದ ಎಲ್ಲಿಗೆ ಹೋದರೂ ₹ 5 ಮಾತ್ರ!

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 6:52 IST
Last Updated 5 ಫೆಬ್ರುವರಿ 2020, 6:52 IST
   

ಕಲಬುರ್ಗಿ: ನಗರದಲ್ಲಿ ಫೆಬ್ರುವರಿ 5ರಿಂದ 7ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಮ್ಮೇಳನಕ್ಕೆ ಆಗಮಿಸುವ ಸಾರ್ವಜನಿಕರು, ಪ್ರಯಾಣಿಕರಿಗಾಗಿ ಮೂರು ದಿನಗಳವರೆಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸೀಮ್ ತಿಳಿಸಿದ್ದಾರೆ.

ನಗರದ ಎಲ್ಲಾ ಬಡಾವಣೆಗಳಿಂದ ಸಮ್ಮೇಳನ ನಡೆಯುವ ಸ್ಥಳವಾದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ವಿಶೇಷ ಮತ್ತು ಹೆಚ್ಚುವರಿ ನಗರ ಸಾರಿಗೆ ಬಸ್ಸುಗಳನ್ನು ಓಡಿಸಲಾಗುತ್ತದೆ. ನಗರದಲ್ಲಿ ಸಂಚರಿಸುವ ಎಲ್ಲಾ ನಗರ ಸಾರಿಗೆಗಳಲ್ಲಿ ಪ್ರಯಾಣಿಸುವವರು ಯಾವುದೇ ಸ್ಥಳದಲ್ಲಿ ಹತ್ತಿ ಇಳಿದರೂ ₹ 5 ಪಾವತಿಸಬೇಕು.

ಪ್ರವಾಸೋದ್ಯಮ ಇಲಾಖೆಯಿಂದ ನಗರದಲ್ಲಿನ ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಂಸ್ಥೆಗೆ ವಾಹನ ಕೇಳಿದ್ದಲ್ಲಿ ಕನಿಷ್ಠ 30 ಜನ ಪ್ರಯಾಣಿಕರಿದ್ದಲ್ಲಿ ಪ್ರತಿ ಪ್ರಯಾಣಿಕರಿಂದ ₹ 125 ಪಡೆದು ಸಂಸ್ಥೆಯಿಂದ ವಾಹನಗಳ ಸೇವೆ ಒದಗಿಸಲಾಗುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.