ಕಾಳಗಿ: ‘ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿಯಾಗಿ ನಿರ್ಮಿಸುತ್ತಿರುವ ಫತರಾ ಶೆಡ್ ತೆರುವುಗೊಳಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ದತ್ತಾತ್ರೇಯ ಗುತ್ತೇದಾರ, ಪರಮೇಶ್ವರ ಕಟ್ಟಿಮನಿ, ಕಾಳಪ್ಪ ಸುಂಠಾಣ ಆಗ್ರಹಿಸಿದ್ದಾರೆ.
‘ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನ ಕೊರತೆ ಮತ್ತು ನಿಲ್ಲಲ್ಲು ಸ್ಥಳದ ಕೊರತೆ ಇದೆ. ಹೀಗಿದ್ದರೂ ಖಾಸಗಿ ವ್ಯಕ್ತಿಯೊಬ್ಬರು ಟೆಂಡರ್ ಪಡೆದು ಹಣ್ಣಿನ ವ್ಯಾಪಾರಕ್ಕೆ ಶೆಡ್ ನಿರ್ಮಿಸುತ್ತಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಮಾಣ ಹಂತದ ಶೆಡ್‌ನ್ನು ತೆರವುಗೊಳಿಸಬೇಕು’ ಎಂದು ಆಗ್ರಹಿಸಿದರು.
‘ಬಸ್ ನಿಲ್ದಾಣದ ಕಾಂಪೌಂಡ್ ಗೋಡೆಯ ಒಳಗೆ ಬೆಳೆದಿರುವ ಗಿಡಗಂಟಿ ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಹೆಚ್ಚಿನ ಹಣ ವಸೂಲಿಗೆ ಕಡಿವಾಣ ಹಾಕಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.