ನಾಯಿ
ಕಾಳಗಿ: ತಾಲ್ಲೂಕಿನ ಕೋಡ್ಲಿ ಗ್ರಾಮದಲ್ಲಿ ಸೆ.5ರಂದು 14 ಜನರಿಗೆ ಹುಚ್ಚು ನಾಯಿ ಕಡಿದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಕುರಿತು ಸೋಮವಾರ ಗ್ರಾಮ ಪಂಚಾಯಿತಿಗೆ ಮನವಿ ಪತ್ರ ಸಲ್ಲಿಸಿ ‘ಗ್ರಾಮದಲ್ಲಿ ಹುಚ್ಚುನಾಯಿ ಕಡಿತಕ್ಕೆ ಒಳಗಾದ 14 ಜನರು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಹೋದರೆ ವೈದ್ಯರು ಇರಲಿಲ್ಲ. ಆಗ ಆಂಬುಲೆನ್ಸ್ ತರಿಸಿ ಈ ಎಲ್ಲರನ್ನೂ ಕಲಬುರಗಿ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಚಾಂದಸಾಬ ಅಬ್ದುಲ್ ಸಾಬ ದೇವರ, ಮಲ್ಲಿಕಾರ್ಜುನ ನೂರಣಗಿ, ಅಶ್ವಥ್ ಬುಬಲಿ, ನಾಗಣ್ಣಾ ಮಂತಟ್ಟಿ, ರಾಚಪ್ಪ ಪಾಟೀಲ, ಅಣ್ಣರಾವ ಅರಳಿ, ಮಲ್ಲಯ್ಯ ಸಾಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.