ADVERTISEMENT

ನಿಂಬಾಳ: ಗಡಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 15:33 IST
Last Updated 26 ಮಾರ್ಚ್ 2024, 15:33 IST
ಆಳಂದ ತಾಲ್ಲೂಕಿನ ನಿಂಬಾಳ ಚೆಕ್‌ಪೋಸ್ಟ್‌ಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌ ದಾಖಲೆಗಳ ಪರಿಶೀಲನೆ ನಡೆಸಿದರು
ಆಳಂದ ತಾಲ್ಲೂಕಿನ ನಿಂಬಾಳ ಚೆಕ್‌ಪೋಸ್ಟ್‌ಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌ ದಾಖಲೆಗಳ ಪರಿಶೀಲನೆ ನಡೆಸಿದರು   

ಆಳಂದ: ತಾಲ್ಲೂಕಿನ ನಿಂಬಾಳ ಗ್ರಾಮದ ಚೆಕ್‌ಪೋಸ್ಟ್‌ಗೆ ಮಂಗಳವಾರ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಭೇಟಿ ನೀಡಿ ಪರಿಶಿಲನೆ ನಡೆಸಿದರು.

ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ನೆರೆಯ ಮಹಾರಾಷ್ಟ್ರದಿಂದ ಸಂಪರ್ಕ ಕಲ್ಪಿಸುವ ತಾಲ್ಲೂಕಿನ ನಿಂಬಾಳ, ಹಿರೋಳಿ, ಖಜೂರಿ ಮಾರ್ಗದ ಗಡಿ ಚೆಕ್‌ಪೋಸ್ಟ್‌ನ ಅಧಿಕಾರಿಗಳು ಎಚ್ಚರಿಂದ ಕಾರ್ಯನಿರ್ವಹಿಸಬೇಕು. ಎಲ್ಲ ವಾಹನಗಳ ಕಟ್ಟುನಿಟ್ಟಿನ ತಪಾಸಣೆ ನಡೆಯಬೇಕು ಎಂದು ಸೂಚಿಸಿದರು.

₹10 ಲಕ್ಷಕ್ಕೂ ಮೇಲ್ಪಟ್ಟ ಹಣ ಸಿಕ್ಕರೆ ತಕ್ಷಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು, ಮದ್ಯ ಸಾಗಾಟ, ಉಡುಗೊರೆ, ಬಟ್ಟೆ, ಗೃಹಪಯೋಗಿ ಸಾಮಗ್ರಿಗಳ ಸಾಗಾಟದ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.

ADVERTISEMENT

ದಾಖಲೆಗಳನ್ನು ಪರಿಶೀಲಿಸಿ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ವಿದ್ಯುತ್‌, ಪ್ಯಾನ್‌ ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ತಹಶೀಲ್ದಾರ್‌ ಪ್ರಕಾಶ ಹೊಸಮನಿ ಅವರಿಗೆ ತಿಳಿಸಿದರು.

ಆಳಂದ ತಾಲ್ಲೂಕಿನ ನಿಂಬಾಳ ಗಡಿ ಚೆಕ್‌ ಪೋಸ್ಟ್‌ ಗೆ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌ ಎಸ್‌ ಪಿ ಅಕ್ಷಯ ಹಾಕೆ ಭೇಟಿ ನೀಡಿ ತಪಾಸಣೆ ನಡೆಸಿದರು.

ತಹಶೀಲ್ದಾರ್‌ ಪ್ರಕಾಶ ಹೊಸಮನಿ, ತಾ.ಪಂ ಇಒ ಮಾನಪ್ಪ ಕಟ್ಟಿಮನಿ, ಎಆರ್‌ಒ ಮಹಾಂತೇಶ ಮುಳಗುಂದ, ಶಿರಸ್ತೇದಾರ್ ಶ್ರೀನಿವಾಸ ಕುಲಕರ್ಣಿ, ಶರಣಬಸಪ್ಪ ಹಕ್ಕಿ, ಆನಂದ ಪೂಜಾರಿ, ಬಸವರಾಜ ಸಿಂಗಶೆಟ್ಟಿ, ಸಿಪಿಐ ಸಿದ್ರಾಮಯ್ಯ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.