ADVERTISEMENT

ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 4:04 IST
Last Updated 27 ಸೆಪ್ಟೆಂಬರ್ 2022, 4:04 IST
   

ಕಲಬುರಗಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಮುಖಂಡರ ಮನೆ ಮೇಲೆ ಮಂಗಳವಾರ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ.

ಇಕ್ಬಾಲ್ ಕಾಲೊನಿ ನಿವಾಸಿ, ಸಂಘಟನೆಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಮಜರ್ ಹುಸೇನ್, ಮುಖಂಡ ಇಸಾಮೊದ್ದೀನ್ ಎಂಬುವವರನ್ನು ಬಂಧಿಸಲಾಗಿದೆ.

ಖಮರ್ ಕಾಲೊನಿ ನಿವಾಸಿ ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಅಲೀಮ್ ಇಲ್ಲಾಹಿ ಮನೆಯ ಮೇಲೂ ದಾಳಿ ಮಾಡಲಾಗಿದ್ದು, ಈ ವೇಳ ಆತ ಮನೆಯಲ್ಲಿ ಇರಲಿಲ್ಲ. ಅಲೀಮ್‌ ಹಾಗೂ ಮತ್ತೊಬ್ಬ‌ ಮುಖಂಡನಿಗಾಗಿ ಪೊಲೀಸರು ಹುಡುಕಾಟ ‌ನಡೆಸಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.