ಕಲಬುರ್ಗಿ: ಜಿಲ್ಲಾ ಪ್ರವಾಸದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಗುರುವಾರ ಬೆಳಿಗ್ಗೆ ಗಾಣಗಾಪುರದ ದತ್ತಾತ್ರೇಯನ ದರ್ಶನ ಪಡೆದರು.
ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮೂಡ, ರಾಜುಗೌಡ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಪಂಚಾಯಿತಿ ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ ಇದ್ದರು.
ದೇವಸ್ಥಾನ ಮಂಡಳಿ ಪರವಾಗಿ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಅವರು ಸಚಿವರಿಗೆ ಶಾಲು ಹೊದಿಸಿ, ದತ್ತನ ಫೋಟೋ ನೀಡಿ ಗೌರವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.