ಬೀದರ್‌ನಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ಚಿಣ್ಣರು ಬೆಂಕಿ ಎದುರು ಕುಳಿತು ಮೈ ಬಿಸಿ ಮಾಡಿಕೊಂಡರು
ಪ್ರಜಾವಾಣಿ ಚಿತ್ರ: ಲೋಕೇಶ ವಿ. ಮರಕಲ್
ಕಲಬುರಗಿ: ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿ ಹೆಚ್ಚುತ್ತಿದ್ದು, ಜನರನ್ನು ನಡುಗಿಸುತ್ತಿದೆ. ಬೀದರ್ ಜಿಲ್ಲೆಯಲ್ಲಿ ಸೋಮವಾರ ರಾಜ್ಯದಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 7.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ 8.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಜನವರಿ ತಿಂಗಳಿನಲ್ಲಿ ಚಳಿ ಇನ್ನಷ್ಟು ಹೆಚ್ಚಲಿದ್ದು, ದಾಖಲೆಯ ಅತಿ ಕಡಿಮೆ ತಾಪಮಾನ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಾಂತ್ರಿಕ ಅಧಿಕಾರಿ ಬಸವರಾಜ್ ಬಿರಾದಾರ್ ಮಾಹಿತಿ ನೀಡಿದ್ದಾರೆ.
ಬೀದರ್ ಜಿಲ್ಲೆಯಲ್ಲಿ 2023ರ ಜನವರಿ 9ರಂದು ತಾಪಮಾನ 5.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಈ ವರ್ಷ ಆ ದಾಖಲೆಯನ್ನು ದಾಟಿ 5 ಡಿಗ್ರಿ ಸೆಲ್ಸಿಯಸ್‌ಗೆ ಉಷ್ಣಾಂಶ ಇಳಿಯುವ ಸಾಧ್ಯತೆಯಿದೆ’ ಎಂದು ಅವರು ಅಂದಾಜಿಸಿದ್ದಾರೆ.
ರಾಯಚೂರಿನಲ್ಲಿ 13 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.