ADVERTISEMENT

ಕಲಬುರಗಿಯಲ್ಲಿ ಪ್ರವಾಹ ಪರಿಸ್ಥಿತಿ: ತುರ್ತು ಕ್ರಮಕ್ಕೆ DC, CEOಗಳಿಗೆ ಸಿಎಂ ಸೂಚನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2025, 10:49 IST
Last Updated 28 ಸೆಪ್ಟೆಂಬರ್ 2025, 10:49 IST
<div class="paragraphs"><p>ಕಲಬುರಗಿಯಲ್ಲಿ ಪ್ರವಾಹ ಪರಿಸ್ಥಿತಿ: ತುರ್ತು ಕ್ರಮಕ್ಕೆ DC, CEOಗಳಿಗೆ ಸಿಎಂ ಸೂಚನೆ</p></div>

ಕಲಬುರಗಿಯಲ್ಲಿ ಪ್ರವಾಹ ಪರಿಸ್ಥಿತಿ: ತುರ್ತು ಕ್ರಮಕ್ಕೆ DC, CEOಗಳಿಗೆ ಸಿಎಂ ಸೂಚನೆ

   

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ತಾಣಗಳ ಮುಖಾಂತರ ಪ್ರವಾಹ ಪರಿಸ್ಥಿತಿ ಬಗ್ಗೆ ತುರ್ತು ಕ್ರಮ ವಹಿಸಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ.

ADVERTISEMENT

ಕಲಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾಗೂ ಕೃಷ್ಣಾ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿದೆ ಎಂದಿದ್ದಾರೆ.

ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಗಳು ಹೀಗಿವೆ..

* ಜಿಲ್ಲಾಧಿಕಾರಿಗಳು ಮತ್ತು ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.

* ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.

* ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.

* ಜನ ಮತ್ತು ಜಾನವಾರುಗಳ ಪ್ರಾಣ ರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಗತ್ಯವಿರುವ ಎಲ್ಲಾ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

* ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳು, ಜಾನುವಾರುಗಳಿಗೆ ಅಗತ್ಯ ಮೇವು ಸೇರಿದಂತೆ ತಾತ್ಕಾಲಿಕ ಸೂರು ಕಲ್ಪಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.