ADVERTISEMENT

ಕಲ್ಯಾಣ ಕರ್ನಾಟಕ | ಪ್ರತ್ಯೇಕ ಸಚಿವಾಲಯಕ್ಕೆ ಅನುಮೋದನೆ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 11:34 IST
Last Updated 16 ಸೆಪ್ಟೆಂಬರ್ 2025, 11:34 IST
<div class="paragraphs"><p>ಪ್ರಿಯಾಂಕ್ ಖರ್ಗೆ</p></div>

ಪ್ರಿಯಾಂಕ್ ಖರ್ಗೆ

   

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಚಿವಾಲಯ ಸ್ಥಾಪನೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಸಕಾಲದಲ್ಲಿ ಪೂರೈಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಈ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲೂ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ’ ಎಂದಿದ್ದಾರೆ.

ADVERTISEMENT

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ನಿಟ್ಟಿನಲ್ಲಿ ಹೊಸ ಸಚಿವಾಲಯವನ್ನು ಸೃಷ್ಟಿಸಲು ಕಾರಣರಾದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪಟದ ನನ್ನೆಲ್ಲ ಸಹೋದ್ಯೋಗಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.