ಕಲಬುರಗಿ: ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಪಡೆದು ಭಾರತಕ್ಕೆ ಸೇರ್ಪಡೆಯಾದ ಪ್ರಯುಕ್ತ ಇಲ್ಲಿನ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು.
ನಂತರ ತೆರೆದ ಜೀಪಿನಲ್ಲಿ ಒಂದು ಸುತ್ತು ಹಾಕಿ ಪ್ರೇಕ್ಷಕರು, ಪೊಲೀಸರು ಹಾಗೂ ವಿವಿಧ ತುಕಡಿಗಳತ್ತ ಕೈ ಬೀಸಿದರು.
ನಂತರ ಸಿವಿಲ್, ಗೃಹರಕ್ಷಕ ದಳ, ವಾದ್ಯ ವೃಂದ, ಅಬಕಾರಿ ಪಡೆ, ಅರಣ್ಯ ಪಡೆ, ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ಕೆಎಸ್ ಆರ್ ಪಿ, ಕೆಎಸ್ಐಎಸ್ಎಫ್, ಕೆಕೆಆರ್ ಟಿಸಿ ಭದ್ರತಾ ಪಡೆ, ಸೇರಿದಂತೆ ವಿವಿಧ ಪಡೆಗಳಿಂದ ಪಥಸಂಚಲನ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಸಂಸದ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ, ಶಾಸಕಿ ಕನೀಜ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ, ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕೆಕೆಆರ್ ಡಿಬಿ ಕಾರ್ಯದರ್ಶಿ ನಲಿನ್ ಅತುಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸಲು, ಉಪವಿಭಾಗಾಧಿಕಾರಿ ಸಾಹಿತ್ಯ ಆಲದಕಟ್ಟಿ ಇತರರು ವೇದಿಕೆಯಲ್ಲಿದ್ದರು.
ಇದಕ್ಕೂ ಮುನ್ನ ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.