ADVERTISEMENT

ಕರಾಟೆ ಸ್ಪರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2025, 13:25 IST
Last Updated 28 ಜನವರಿ 2025, 13:25 IST
ಬೆಂಗಳೂರಿನಲ್ಲಿ ಈಚೆಗೆ ನಡೆದ 16ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕಲಬುರಗಿಯ ಎಸ್.ಆರ್.ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಈಚೆಗೆ ನಡೆದ 16ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕಲಬುರಗಿಯ ಎಸ್.ಆರ್.ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು   

ಕಲಬುರಗಿ: ನಗರದ ಎಸ್.ಆರ್.ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಈಚೆಗೆ ನಡೆದ 16ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯು ಉತ್ತರಾಖಂಡದಲ್ಲಿ ನಡೆಯಲಿದೆ.

ಕೆಡೆಟ್‌ 14ರಿಂದ 15 ವರ್ಷದೊಳಗಿನ ಬಾಲಕ-ಬಾಲಕಿಯರ ಸ್ಪರ್ಧೆಯಲ್ಲಿ ಶ್ವೇತಾ ಪ್ರಥಮ(42 ಕೆ.ಜಿ), ಪೂರ್ವಿಕಾ ಪ್ರಥಮ (66 ಕೆ.ಜಿ), ಸುಪ್ರಿಯಾ ದ್ವಿತೀಯ(42 ಕೆ.ಜಿ) ಸ್ಥಾನ ಪಡೆದಿದ್ದಾರೆ.

ಟೀಮ್ ಕಟಾ ಸ್ಪರ್ಧೆಯಲ್ಲಿ ಶ್ವೇತಾ ಪ್ರಥಮ (42 ಕೆ.ಜಿ), ಪೂರ್ವಿಕಾ ಪ್ರಥಮ (66 ಕೆ.ಜಿ), ಸುಪ್ರಿಯಾ ಪ್ರಥಮ (42 ಕೆ.ಜಿ) ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ADVERTISEMENT

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿ ಚಕೋರ ಮೆಹತಾ, ಪ್ರಾಚಾರ್ಯೆ ಪ್ರೀತಿ ಮೆಹತಾ, ದೈಹಿಕ ಶಿಕ್ಷಣದ ಮುಖ್ಯಸ್ಥ ಬಸವರಾಜ ತಳಕೇರಿ, ಕರಾಟೆ ತರೆಬೇತುದಾರ ಕೃಷ್ಣಾ ಗೌಳಿ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.