
ಪ್ರಜಾವಾಣಿ ವಾರ್ತೆ
ಶಾರದಾ ವಿ. ಪಾಟೀಲ
ಚಿಂಚೋಳಿ (ಕಲಬುರಗಿ ಜಿಲ್ಲೆ): ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ವಿ.ಪಾಟೀಲ(93) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು.
ಅವರಿಗೆ ಪುತ್ರ ಮಾಜಿ ಶಾಸಕ ಕೈಲಾಸ ವೀರೇಂದ್ರ ಪಾಟೀಲ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ವೀರೇಂದ್ರ ಪಾಟೀಲರು 1997ರ ಮಾರ್ಚ್ 14ರಂದು ನಿಧನರಾಗಿದ್ದರು. ಮಾಜಿ ಸಂಸದ(ಅಳಿಯ) ಡಾ. ಬಿ.ಜಿ ಜವಳಿ ಸೇರಿದಂತೆ ಅಪಾರ ಬಂಧು ಬಳಗ ಹೊಂದಿದ್ದಾರೆ.
ಅಂತ್ಯಕ್ರಿಯೆ ಚಿಂಚೋಳಿಯ ವೀರೇಂದ್ರ ಪಾಟೀಲ ಸಮಾಧಿ ಪಕ್ಕದಲ್ಲಿ ಬುಧವಾರ ಮಧ್ಯಾಹ್ನ 2ಕ್ಕೆ ನಡೆಸಲಾಗುವುದು. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಬುಧವಾರ ಬೆಳಿಗ್ಗೆ ವೀರೇಂದ್ರ ಪಾಟೀಲ ಪಿಯು ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.