ADVERTISEMENT

‘ಕಲಬುರ್ಗಿ ಜಿಲ್ಲೆ ಜನರು ಸೋಂಬೇರಿಗಳು’: ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ನಿರಾಣಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 9:00 IST
Last Updated 28 ಆಗಸ್ಟ್ 2021, 9:00 IST
ಮುರುಗೇಶ ನಿರಾಣಿ (ಸಂಗ್ರಹ ಚಿತ್ರ)
ಮುರುಗೇಶ ನಿರಾಣಿ (ಸಂಗ್ರಹ ಚಿತ್ರ)   

ಕಲಬುರ್ಗಿ: ‘ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು’ ಎಂದು ಬಾಗಲಕೋಟೆಯಲ್ಲಿ ಇತ್ತೀಚೆಗೆ ಹೇಳಿಕೆ ನೀಡಿದ್ದಕ್ಕೆ ಜಿಲ್ಲೆಯ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು.

ನಗರದ ಲುಂಬಿಣಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಇಲ್ಲಿನ ಜನಗಳ ಬಗ್ಗೆ ಕಾಳಜಿ ಇಟ್ಟುಕೊಂಡೇ ಎದೆಯಾಳದ ಮಾತುಗಳನ್ನು ಹೇಳಿದ್ದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಕಲಬುರ್ಗಿ ಜಿಲ್ಲೆ ಹಾಗೂ ಜನಗಳ ಬಗ್ಗೆ ಅಪಾರವಾದ ಕಾಳಜಿ ಇದೆ’ ಎಂದರು.

ಜಿಲ್ಲೆಯ ಜನಗಳ ಬಗ್ಗೆ ನೀಡಿದ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮುಖಂಡ ಸುಭಾಷ್ ರಾಠೋಡ, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.