
ಪ್ರಜಾವಾಣಿ ವಾರ್ತೆ
ಕಲಬುರ್ಗಿ: ನಗರವೂ ಸೇರಿದಂತೆ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆಯಿಂದಲೂ ಶುರುವಾಗಿ ಈಗಲೂ ಮುಂದುವರೆದಿದೆ.
ಇದರಿಂದಾಗಿ ನಗರದ ರಸ್ತೆಗಳು, ಹಳ್ಳಿಯ ಹೊಲಗಳಲ್ಲಿ ನೀರು ತುಂಬಿಕೊಂಡಿದೆ.
ಮಹಾರಾಷ್ಟ್ರದ ವೀರ್ ಜಲಾಶಯ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಸುತ್ತಿದೆ. ಇದರಿಂದಾಗಿ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ನಿಂದಲೂ ನದಿಗೆ ನೀರನ್ನು ಹರಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.