ADVERTISEMENT

ಕಲಬುರ್ಗಿ ಕೈತಪ್ಪಿದ ಏಮ್ಸ್‌: ಕರ್ನಾಟಕ ನವನಿರ್ಮಾಣ ಸೇನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 1:13 IST
Last Updated 10 ಫೆಬ್ರುವರಿ 2021, 1:13 IST
ಏಮ್ಸ್‌ ಅನ್ನು ಕಲಬುರ್ಗಿಗೇ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು
ಏಮ್ಸ್‌ ಅನ್ನು ಕಲಬುರ್ಗಿಗೇ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು   

ಪ್ರಜಾವಾಣಿ ವಾರ್ತೆ

ಕಲಬುರ್ಗಿ: ಕಲಬುರ್ಗಿಯಿಂದ ಏಮ್ಸ್‌ (AIIMS) ಅನ್ನು ಕಾರಣವಿಲ್ಲದೇ ಹುಬ್ಬಳ್ಳಿ– ಧಾರವಾಡಕ್ಕೆ ಸ್ಥಳಾಂತರಿಸುತ್ತಿರುವ ಕೇಂದ್ರ ಸರ್ಕಾರ ಕ್ರಮ ಖಂಡನಾರ್ಹ. ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಬಹುದೊಡ್ಡ ಅನ್ಯಾಯವಿದು ಎಂದುಕರ್ನಾಟಕ ನವನಿರ್ಮಾಣ ಸೇನೆ ಮುಖಂಡರು ಖಂಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,ನಿಜಾಮರ ಆಡಳಿತ ಕಾಲದಿಂದಲೂ ತುಳಿತಕ್ಕೆ ಒಳಗಾದ, ಮಲತಾಯಿ ಧೋರಣೆ ಅನುಭವಿಸಿದ ಜಿಲ್ಲೆಯ ಬಗ್ಗೆ ಸರ್ಕಾರ ತಾಳಿದ ನಿರ್ಧಾರ ಖಂಡನಾರ್ಹ. ಏಮ್ಸ್‌ ಸ್ಥಾಪನೆಗೆ ಎಲ್ಲ ಸೌಕರ್ಯಗಳೂ ಇದ್ದಾಗಿಯೂ ಏಕಾಏಕಿ ಇಂಥ ನಿರ್ಧಾರ ಕೈಗೊಂಡಿದ್ದ ಕಲ್ಯಾಣದ ನಾಡಿನ ಕನ್ನಡಿಗರನ್ನು ಕೆರಳಿಸಿದೆ. ಇದರ ವಿರುದ್ಧ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಅವರು ಹೇಳಿದರು.

ADVERTISEMENT

ಈ ಭಾಗಕ್ಕೆ ಸಿಕ್ಕ 371ಜೆ ಅಡಿಯಲ್ಲಿನ ಯಾವುದೇ ಸೌಕರ್ಯವನ್ನೂ ಪೂರ್ಣವಾಗಿ ನೀಡಿಲ್ಲ. ಹೈದರಾಬಾದ್‌ ಕರ್ನಾಟಕ ಎಂಬ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಿದ್ದನ್ನು ಬಿಟ್ಟರೆ ರಾಜ್ಯ ಸರ್ಕಾರ ಕೂಡ ಏನನ್ನೂ ಈ ಭಾಗಕ್ಕೆ ನೀಡಿಲ್ಲ.ಡಾ.ಡಿ.ಎಂ. ನಂಜುಂಡಪ್ಪ ವರದಿ ಅನ್ವಯ ಜಿಲ್ಲೆಗೆ ಮಂಜೂರಾಗ ಬೇಕಾಗಿದ್ದ ಏಮ್ಸ್‌ ಅನ್ನು ಸದ್ದಿಲ್ಲದೆ ರಾಜಕೀಯವಾಗಿ ಒತ್ತಡ ಹೇರಿ ಹುಬ್ಬಳ್ಳಿ– ಧಾರವಾಡಕ್ಕೆ ಸ್ಥಳಾಂತರಿಸಲಾಗಿದೆ. ಈ ಧೋರಣೆ ಕೈಬಿಟ್ಟು ಏಮ್ಸ್‌ ಅನ್ನು ಮರಳಿ ಕಲಬುರ್ಗಿಗೇ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಉಗ್ರವಾಗಲಿದೆ ಎಂದರು.

ಸಂಘಟನೆಯ ನಗರ ಘಟಕದ ಅಧ್ಯಕ್ಷ ಸತೀಶ ಪಾಟೀಲ ನೇತೃತ್ವದಲ್ಲಿ ಧರ್ಮರಾಜ, ಮಲ್ಲೇಶ ಮುಗವಿ, ನೀಲಕಂಠ, ಯಾಸೀನ್‌, ರಾಮು, ಅಭಿಷೇಕ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.