ಕಲಬುರಗಿ: ಪೊಲೀಸರು ಸಮವಸ್ತ್ರದಲ್ಲಿಯೇ ಹೋಳಿ ಹಬ್ಬವನ್ನು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಜಿಲ್ಲೆಯ ಸೇಡಂ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪೊಲೀಸರು ಮಧ್ಯಾಹ್ನದ ಸಮಯದಲ್ಲಿ ಖಾಕಿ ಬಟ್ಟೆ ಧರಿಸಿ ಪೊಲೀಸ್ ಸಮವಸ್ತ್ರದಲ್ಲಿಯೇ ಬಣ್ಣ ಎರಚಿ ಹಾಡಿಗೆ ನೃತ್ಯ ಪ್ರದರ್ಶಿಸಿದ್ದಾರೆ.
ಮಹಿಳಾ ಮತ್ತು ಪುರುಷ ಪೊಲೀಸರು ಪರಸ್ಪರ ನೃತ್ಯಕ್ಕೆ ಹೆಜ್ಜೆ ಹಾಕಿದ್ದಾರೆ. ಮುಖಕ್ಕೆ ಬಣ್ಣ ಬಳಿದುಕೊಂಡಿರುವ ದೃಶ್ಯಗಳು ವಿಡಿಯೊದಲ್ಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.