ಕಲಬುರಗಿ: ಸ್ಥಳೀಯ ನೂತನ ವಿದ್ಯಾಲಯ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದುಕೊಟ್ಟಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ಜಾಹ್ನವಿ ರಾವ್ ತಿಳಿಸಿದ್ದಾರೆ.
ಶಾಲೆಯ ವಿದ್ಯಾರ್ಥಿನಿ ವಿದ್ಯಾ ಆರ್.ಜೋಶಿ ಶೇ 98.88 ಅಂಕ ಪಡೆದು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಪತ್ರಕರ್ತ ಸಂಗಮನಾಥ ರೇವತಗಾಂವ ಅವರ ಪುತ್ರಿ ಸಂಪದಾ ರೇವತಗಾಂವ ಮತ್ತು ಅಂಬಿಕಾ ಎ.ಕೆ. ಶೇ 98.72 ಅಂಕ ಪಡೆದು ದ್ವಿತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಹರಿಪ್ರಿಯಾ ಪಿ.ಎನ್ ಶೇ 97.60 ಅಂಕ ಪಡೆದು ತೃತೀಯ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಮೂಲ್ಯ ಎಸ್.ಎನ್, ಕುನಾಲ್ ಜಿ.ಡಿ. ಶೇ 96.64, ಅಶ್ವಿನಿ ಪಿ.ಎಂ ಶೇ 96.48 ಅಂಕ ಪಡೆದು ಸಾಧನೆ ಮಾಡಿದ್ದಾರೆ.
18 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 25 ವಿದ್ಯಾರ್ಥಿಗಳು ಪ್ರಥಮ ವರ್ಗದಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಗೌತಮ ಜಹಾಗೀರದಾರ, ಕಾರ್ಯದರ್ಶಿ ಅಭಿಜಿತ್ ದೇಶಮುಖ ಮತ್ತು ಆಡಳಿತ ಮಂಡಳಿ ಸದಸ್ಯರು, ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.