ಕಲಬುರಗಿ: ‘ಕೃಷ್ಣ ಭೀಮಾ ಸಮೃದ್ಧಿ ಪ್ರಾದೇಶಿಕ ಬ್ಯಾಂಕ್‌ನ (ಕೆಬಿಎಸ್) ಕಲಬುರಗಿ ಶಾಖೆಯ ನೌಕರ ಲಿಂಗರಾಜ್ ಗುಂಡೂರಕರ್ ಅವರು ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ’ ಎಂದು ಬ್ಯಾಂಕ್‌ನ ಸಹಾಯಕ ಜನರಲ್ ಮ್ಯಾನೇಜರ್ ಹಾಗೂ ಸಿಬ್ಬಂದಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
‘ಲಿಂಗರಾಜ್ ಅವರನ್ನು ಆಡಳಿತಾತ್ಮಕ ಕಾರಣಕ್ಕೆ ಕಲಬುರಗಿ ಶಾಖೆಯಿಂದ ಆಂಧ್ರಪ್ರದೇಶದ ಚಿರಾಲಾ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆಯನ್ನು ನಿರಾಕರಿಸಿದ ಲಿಂಗರಾಜ್ ಅವರು ಬ್ಯಾಂಕ್ ಅಧಿಕಾರಿಗಳ ವಿರುದ್ಧವೇ ಅನುಚಿತವಾಗಿ ವರ್ತಿಸಿದ್ದಾರೆ. ಕೆಲ ಸಂಘಟನೆಗಳ ಮೂಲಕ ಪ್ರತಿಭಟನೆ ನಡೆಸಿ, ಸಾರ್ವಜನಿಕರಲ್ಲಿ ಬ್ಯಾಂಕ್ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿದ್ದಾರೆ. ವರ್ಗಾವಣೆ ಆದೇಶ ರದ್ದು ಮಾಡಿಸಿಕೊಳ್ಳಬೇಕು ಎಂಬುದು ಅವರ ಉದ್ದೇಶವಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಬ್ಯಾಂಕಿನ ಶಿಸ್ತು ಹಾಗೂ ಸೇವಾ ನಿಯಮಗಳನ್ನು ಉಲ್ಲಂಘಿಸಿ, ಬ್ಯಾಂಕಿನ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಲಿಂಗರಾಜ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.