ADVERTISEMENT

ಕಲಬುರಗಿ: ₹ 25 ಕೋಟಿ ವರ್ಕ್ ಆರ್ಡರ್ ಪ್ರಕರಣ; ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 29 ಮೇ 2025, 19:45 IST
Last Updated 29 ಮೇ 2025, 19:45 IST
<div class="paragraphs"><p>ಬಂಧನ </p></div>

ಬಂಧನ

   

ಕಲಬುರಗಿ: ಕೆಕೆಆರ್‌ಡಿಬಿ ಹಾಗೂ ರಾಜ್ಯ ಸರ್ಕಾರದಿಂದ ₹ 25 ಕೋಟಿ ಟೆಂಡರ್‌ಗಳ ವರ್ಕ್ ಆರ್ಡರ್ (ಕಾರ್ಯಾದೇಶ) ಕೊಡಿಸುವ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ‘ಸೆನ್‌’ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಉಪಗುತ್ತಿಗೆದಾರನಿಂದ ₹ 1.21 ಕೋಟಿ ಪಡೆದು ವಂಚಿಸಿದ ಆರೋಪದಡಿ ಐವರ ವಿರುದ್ಧ ‘ಸೆನ್‌’ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿಯಾದ ಕಲಬುರಗಿಯ ಲಕ್ಷ್ಮಿಕಾಂತ ಕಟ್ಟಿಮನಿ, ಆತನ ಸ್ನೇಹಿತರಾದ ರಾಯಚೂರಿನ ಕಿರಣ್ ಹಾಗೂ ಬೆಂಗಳೂರಿನ ಶ್ರೀಧರನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ವರ್ಕ್ ಆರ್ಡರ್ ಕೊಡಿಸುವುದಾಗಿ ಉಪಗುತ್ತಿಗೆದಾರನಿಂದ ಹಣ ಪಡೆದಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಬ್ಯಾಂಕ್‌ ವಹಿವಾಟಿನ ದಾಖಲೆಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಕೆಕೆಆರ್‌ಡಿಬಿ ಮತ್ತು ರಾಜ್ಯ ಸರ್ಕಾರದಿಂದ ಟೆಂಡರ್ ವರ್ಕ್ ಆರ್ಡರ್ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದೇವೆ. ಆದರೆ, ಟೆಂಡರ್‌ನ ವರ್ಕ್‌ ಆರ್ಡರ್ ಸಿಗಲಿಲ್ಲ. ಉಪಗುತ್ತಿಗೆದಾರನಿಂದ ಪಡೆದ ಹಣವನ್ನು ಹಿಂದುರಿಗಿಸಲು ಸಾಧ್ಯವಾಗಲಿಲ್ಲ. ಹಣಕಾಸಿನ ಅಡಚಣೆಯಾಗಿತ್ತು ಎಂದು ಆರೋಪಿಗಳು ವಿಚಾರಣೆಯಲ್ಲಿ ಹೇಳಿಕೆ ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.