ADVERTISEMENT

ಈದ್ ಮಿಲಾದ್‌ಗೆ 200 ಹೆಚ್ಚುವರಿ ಬಸ್‌

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 16:01 IST
Last Updated 12 ಸೆಪ್ಟೆಂಬರ್ 2024, 16:01 IST
ಎಂ.ರಾಚಪ್ಪ
ಎಂ.ರಾಚಪ್ಪ   

ಕಲಬುರಗಿ: ಈದ್ ಮಿಲಾದ್ ಹಾಗೂ ವಾರಾಂತ್ಯದ ರಜೆ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 14, 15 ಹಾಗೂ 16ರಂದು ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ.

ಸೆ. 12 ಹಾಗೂ 13ರಂದು ನಿಗಮದ ತಾಲ್ಲೂಕು, ಜಿಲ್ಲಾ ಕೇಂದ್ರಗಳಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಸೆ.13 ಮತ್ತು 14ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿಯಾಗಿ 200 ಬಸ್‌ಗಳು ಓಡಾಡಲಿವೆ. ಸೆ.16 ರಿಂದ 19ರವರೆಗೆ ಸಂಸ್ಥೆ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

16 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮುಖಾಂತರ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದ್ದಲ್ಲಿ ಶೇ 10ರಷ್ಟು ರಿಯಾಯತಿ ನೀಡಲಾಗುತ್ತದೆ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.