ADVERTISEMENT

ಕಲಬುರಗಿ | ಗೌರಿ–ಗಣೇಶ ಹಬ್ಬ: ಕೆಕೆಆರ್‌ಟಿಸಿಯಿಂದ‌ 290 ಹೆಚ್ಚುವರಿ ಬಸ್‌ಗಳು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 4:59 IST
Last Updated 23 ಆಗಸ್ಟ್ 2025, 4:59 IST
ಡಾ.ಸುಶೀಲಾ ಬಿ.
ಡಾ.ಸುಶೀಲಾ ಬಿ.   

ಕಲಬುರಗಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ದೈನಂದಿನ ಕಾರ್ಯಾಚರಣೆಯಲ್ಲಿರುವ 199 ಬಸ್‌ಗಳಲ್ಲದೇ 290 ಹೆಚ್ಚುವರಿ ವಾಹನಗಳನ್ನು ಓಡಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ಹಬ್ಬದ ಅವಧಿಯಲ್ಲಿ ಸಾರ್ವಜನಿಕ ಪ್ರಯಾಣಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆಗಸ್ಟ್ 21ರಿಂದ 25ರವರೆಗೆ ಕೆಕೆಆರ್‌ಟಿಸಿ ವ್ಯಾಪ್ತಿಯ ತಾಲ್ಲೂಕು, ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಆಗಸ್ಟ್ 22, 23, 25 ಮತ್ತು 26ರಂದು ಬೆಂಗಳೂರಿನಿಂದ ಕೆಕೆಆರ್‌ಟಿಸಿ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಈ 290 ಬಸ್‌ಗಳು ಹೆಚ್ಚುವರಿಯಾಗಿ ಕಾರ್ಯಾಚರಣೆ ನಡೆಸಲಿವೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ಕೋರಿದ್ದಾರೆ.

ಹಬ್ಬ ಮುಗಿದ ನಂತರ ಆಗಸ್ಟ್ 27ರಿಂದ 30ರವರೆಗೆ ಕೆಕೆಆರ್‌ಟಿಸಿ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.