ADVERTISEMENT

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಪದಗ್ರಹಣ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 9:59 IST
Last Updated 31 ಅಕ್ಟೋಬರ್ 2025, 9:59 IST
<div class="paragraphs"><p>ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಅರುಣಕುಮಾರ ಎಂ. ಪಾಟೀಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.</p></div>

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಅರುಣಕುಮಾರ ಎಂ. ಪಾಟೀಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

   

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಅರುಣಕುಮಾರ ಎಂ. ಪಾಟೀಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ನಗರದ ಜಗತ್ ‌ರಸ್ತೆಯಲ್ಲಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಟ್ಟಡದ ಮೊದಲ‌ ಮಹಡಿಯಲ್ಲಿರುವ ಕಚೇರಿಯಲ್ಲಿ ನಡೆದ ಸರಳ‌ ಸಮಾರಂಭದಲ್ಲಿ ಅಧಿಕಾರ‌ ವಹಿಸಿಕೊಂಡರು.

ADVERTISEMENT

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ‌ಖರ್ಗೆ, ಶಾಸಕ‌ರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ‌ ಕಮಕನೂರ ಸೇರಿದಂತೆ ಹಲವರು ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.

ಕುಡಾ‌ ಅಧ್ಯಕ್ಷ ಮಜರ ಆಲಂಖಾನ್, ಕೆಕೆಆರ್ ಟಿಸಿ ಎಂಡಿ ಬಿ.ಸುಶೀಲಾ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್ ಮೀನಾ, ಪಾಲಿಕೆ ‌ಆಯುಕ್ತ ಅವಿನಾಶ ಶಿಂದೆ ಸೇರಿದಂತರ‌ ಹಲವು ಅಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.