ಕಲಬುರಗಿ: ‘2024-25ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಚಿಣಮಗೇರಾದ ಕೆ.ಪಿ.ಆರ್. ಶುಗರ್ ಆ್ಯಂಡ್ ಅಪೇರಲ್ಸ್ ಲಿ. ಸಕ್ಕರೆ ಕಾರ್ಖಾನೆಯು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಹೊರತುಪಡಿಸಿ ಪ್ರತಿ ಟನ್ ಕಬ್ಬಿಗೆ ₹2700 ದರವನ್ನು ರೈತರಿಗೆ ನೀಡಲು ಒಪ್ಪಿಕೊಂಡಿದೆ’ ಎಂದು ಅಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಭೀಮರಾಯ ತಿಳಿಸಿದ್ದಾರೆ.
‘ನ.8ರಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಬ್ಬು ಬೆಳೆಗಾರರು, ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಪದಾಧಿಕಾರಿಗಳ ಸಭೆಯಲ್ಲಿ ರೈತರ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಹೊರತುಪಡಿಸಿ ಪ್ರತಿ ಟನ್ ಕಬ್ಬಿಗೆ ಏಕ ರೀತಿಯ ದರ ನಿಗದಿಪಡಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಜಿಲ್ಲಾಡಳಿತದ ಸಲಹೆಗೆ ಸ್ಪಂದಿಸಿರುವ ಕೆ.ಪಿ.ಆರ್ ಶುಗರ್ಸ್ ಕಂಪನಿಯು ₹2,700 ದರ ನೀಡುವುದಾಗಿ ಲಿಖಿತ ಹೇಳಿಕೆ ನೀಡಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.