ADVERTISEMENT

ಪ್ರಾದೇಶಿಕ ಆಯುಕ್ತರಾಗಿ ಕೃಷ್ಣ ಬಾಜಪೇಯಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 15:50 IST
Last Updated 8 ಸೆಪ್ಟೆಂಬರ್ 2022, 15:50 IST
ಕೃಷ್ಣ ಬಾಜಪೇಯಿ 
ಕೃಷ್ಣ ಬಾಜಪೇಯಿ    

ಕಲಬುರಗಿ: ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ 2010ನೇ ಸಾಲಿನ ಐಎಎಸ್‌ ಅಧಿಕಾರಿ ಕೃಷ್ಣ ಬಾಜಪೇಯಿ ಅವರನ್ನು ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ವೆಂಕಟೇಶ ಕುಮಾರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಾರ್ಯದರ್ಶಿ ಹಾಗೂ ಯೋಜನಾ ಇಲಾಖೆಯ ಜಂಟಿ ಕಾರ್ಯದರ್ಶಿ ಹುದ್ದೆಯ ಪ್ರಭಾರವನ್ನೂ ವಹಿಸಲಾಗಿದೆ. ಕೃಷ್ಣ ಬಾಜ‍ಪೇಯಿ ಅವರು ಹಾವೇರಿ ಜಿಲ್ಲಾಧಿಕಾರಿಯಾಗಿ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT