ADVERTISEMENT

ಭ್ರಷ್ಟಾಚಾರ ತಡೆಗೆ ಆಗ್ರಹಿಸಿ ಧರಣಿ ನಾಳೆ

​ಪ್ರಜಾವಾಣಿ ವಾರ್ತೆ
Published 9 ಮೇ 2022, 2:52 IST
Last Updated 9 ಮೇ 2022, 2:52 IST

ಕಲಬುರಗಿ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೇ 10ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸಂಘಟನಾ ಕಾರ್ಯದರ್ಶಿ ಸೈಬಣ್ಣ ಜಮಾದಾರ ತಿಳಿಸಿದರು.

ಜಿಲ್ಲೆಯಲ್ಲಿ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಸಂಬಂಧಿಸಿದವರಿಗೆ ದಾಖಲೆ ಸಮೇತ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲೊ ದೂರಿದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ. ಪಿಎಚ್‌ಡಿ ಪ್ರದಾನ ಮಾಡುವ ಸಂದರ್ಭದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಹಣ ಇರುವವರಿಗೆ ಮಾತ್ರ ಪದವಿ, ಪಿಎಚ್.ಡಿ ಎನ್ನುವಂಥ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಅಕ್ರಮ ಹೊರಗೆಳೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಸೌಲಭ್ಯವಿಲ್ಲದೆ, ಜನರು ಪರದಾಡುವಂತಾಗಿದೆ. ಕೂಡಲೇ ಸೌಕರ್ಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಮುಖರಾದ ವಿಜಯ ಜಾಧವ, ಸಂಜು ಹೋಡಲಕರ, ಪ್ರಕಾಶ ಪಟ್ಟೇದಾರ, ರಾಜು ನೂಲಕರ, ವಿಜಯಕುಮಾರ ಮಠಪತಿ, ಶ್ರೀನಿವಾಸ ಗುತ್ತೇದಾರ, ಗುರುನಾಥ ಹೀರೊಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.